ಗದಗ,ಏ.25: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ವತಿಯಿಂದ ಜರುಗಿದ ದಾಳಿಯಲ್ಲಿ ಅಂದಾಜು 5058 ರೂ. ಮೌಲ್ಯದ 12.960 ಲೀ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. ಏಪ್ರಿಲ 23 ರಂದು ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಶಿರಹಟ್ಟಿ ಪಟ್ಟಣದಿಂದ ಮಾಗಡಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದು 5058 ರೂ. ಮೌಲ್ಯದ 12.960 ಲೀ ಮದ್ಯವನ್ನು ಹಾಗೂ ಒಂದು ದ್ವಿಚಕ್ರವಾಹನವನ್ನು ವಶಕ್ಕೆ ಪಡೆಯಲಾಗಿರುತ್ತದೆ.