5-8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈ ಕೋರ್ಟ್ ಆದೇಶ

ಬೆಂಗಳೂರು, ಮಾ.10- 5 ಮತ್ತು 8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಇಂದು‌ ಆದೇಶ ಹೊರಡಿಸಿದೆ. ಇದರಿಂದಾಗಿ ಸಾರ್ವಜನಿಕ ಶಿಕ್ಣಣ ಇಲಾಖೆ ತೀವ್ರ ಹಿನ್ನಡೆಯುಂಟಾಗಿದೆ.
ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾ.13ರಿಂದ 5, 8ನೇ ತರಗತಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಮೊದಲು 5 ಮತ್ತು 8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ
ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಸಕ್ತ ಸಾಲಿನಲ್ಲಿ 5 ರಿಂದ 8 ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಸರ್ಕಾರ ಹೊರಡಿಸಿದ್ದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.
ಅದರೆ ಈ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸಲ್ಕಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ಹಾಗೂ ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ.
ಇದೇ ವೇಳೆ 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಆಘಾತ ನೀಡಿದೆ.