ಗ್ರಾಮ ಪಂಚಾಯತ್ ಸದಸ್ಯ ದೀಪಕ್ ಪಟದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕುಟುಂಬಸ್ಥರು ಹಾಗೂ ಮರಾಠಾ ಸಮಾಜದ ವತಿಯಿಂದ ನಗರದ ಹಳೇ ಹುಬ್ಬಳ್ಳಿ ಪೆÇಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪೆÇಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಜೆ ಪಟದಾರಿ, ಪುಷ್ಪಾ ಪಟದಾರಿ ಸೇರಿದಂತೆ ಕುಟುಂಬಸ್ಥರು ಹಾಗೂ ಮರಾಠಾ ಸಮಾಜದ ಕಾರ್ಯಕರ್ತರು ಇದ್ದರು.