ಭಾರಿ ಮಳೆಯಿಂದ ಹಾಳಾಗಿರುವ ಶಿರಾಡಿಘಾಟ್, ಚಾರ್ಮುಡಿಘಾಟ್ ಮತ್ತು ಆಗುಂಬೆ ಘಾಟ್ ರಸ್ತೆಗಳ ಸ್ಥಿತಿಗತಿ ಮತ್ತು ಅಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ವಿಕಾಸಸೌಧದಿಂದ ವರ್ಚುಯಲ್ ಸಭೆ ನಡೆಸಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಬಿ.ಹೆಚ್ ಅನಿಲ್‌ಕುಮಾರ್, ಕಾರ್ಯದರ್ಶಿ ಕೃಷ್ಣಾರೆಡ್ಡಿ, ಸಚಿವರುಗಳ ಆಪ್ತ ಕಾರ್ಯದರ್ಶಿ ಕೆ.ಸಿ. ವಿರೂಪಾಕ್ಷ ಮತ್ತಿತರರಿದ್ದಾರೆ.