ಕುಂದಗೋಳ ಪಟ್ಟಣದ ಬಸವಣ್ಣ ಅಜ್ಜನವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಗೋಳ ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸಾಯಿಟಿ ಇವರ ಸಂಯುಕ್ತ ಆಶ್ರಯದಲ್ಲಿ ಅಮೃತ ಮಹೋತ್ಸವದ ಕಿರು ಉದ್ದಿಮೆ ಅಂಗನವಾಡಿ ಸ್ತ್ರೀ ಶಕ್ತಿಯ 35 ಗುಂಪುಗಳಿಗೆ ಚೆಕ್ ವಿತರಣೆಯನ್ನು ಶಾಸಕರಾದ ಕುಸುಮಾವತಿ ಶಿವಳ್ಳಿ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ ಕುರಿ,ಶಿಶು ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ,ಡಾ.ಕೊಗನುರಮಠ,ಅನುಶ್ರೀ,ಬಸಮ್ಮ ಸೇರಿದಂತೆ ವಿವಿಧ ಗ್ರಾಮಗಳ ಸ್ತ್ರೀ ಶಕ್ತಿ ಸಂಘಟನೆಯ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.