ದೈಹಿಕ ಶಿಕ್ಷಣ ಶಿಕ್ಷಕರ, ಉಪನ್ಯಾಸಕರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಕ ಮಾಡುವಂತೆ ಒತ್ತಾಯಿಸಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ಅಸೋಸಿಯೇಷನ್‌ನ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.