ಹುಬ್ಬಳ್ಳಿಯ ಹಳೆಹುಬ್ಬಳ್ಳಿಯ ಇಂಡಿಪಂಪ ಕ್ಲಸ್ಟರಿನ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಇಲ್ಲಿನ ಗುರುದೇವ ವಿದ್ಯಾ ಸಮಿತಿಯ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ, ಬ್ಲಾಕ್ ಹಂತಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಗುರುದೇವ ವಿದ್ಯಾ ಸಮಿತಿಯ ಸಮಸ್ತ ಪದಾಧಿಕಾರಿಗಳು ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವೃಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.