ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಕರ್ನಾಟಕ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ ಕಾಯಿದೆ ಸುಗ್ರೀವಾಜ್ಞೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹೋರಾಟ ಮಾಡುತ್ತಿರುವ ಶ್ರೀಗಳನ್ನು ಭೇಟಿ ಮಾಡಿ ಬೆಂಬಲವನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಕುಂದಗೋಳ ಮತಕ್ಷೇತ್ರದ ನೂರಾರು ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ ಸಮಾಜ ಬಾಂಧವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.