5500 ಕೇಂದ್ರಗಳಲ್ಲಿ ಲಸಿಕೆ ನೀಡಿಕೆ

ಬೆಂಗಳೂರು,ಏ.೧- ರಾಜ್ಯದಲ್ಲಿ ಇಂದಿನಿಂದ ೪೫ ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೊರೊನಾ ಲಸಿಕೆ ನೀಡಲು ರಾಜ್ಯಾದ್ಯಂತ ೫,೫೦೦ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಇಂದಿನಿಂದ ೪೫ ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗಲಿದ್ದು, ಇದಕ್ಕಾಗಿ ೬೫೦ ಖಾಸಗಿ ಮತ್ತ ೪೮೫೦ ಸರ್ಕಾರಿ ಆಸ್ಪತ್ರೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು ೫,೫೦೦ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಬಿಬಿಎಂಪಿಗೆ ೧.೫ ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು ೬೦೦ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.