56ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಕಲಬುರಗಿ,ಸೆ.13:ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ, ತಾಲೂಕು ಲೋಕ ಶಿಕ್ಷಣ ಸಮಿತಿ, ಮಹಾನಗರ ಪಾಲಿಕೆ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ 56ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ/ಸಪ್ತಾಹ-2022 ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ರಂದು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.

  ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷರಾದ ಯಶವಂತ ಗುರುಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಡಿ. ಬದೋಲೆ ಅಧ್ಯಕ್ಷತೆವಹಿಸುವರು. ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಗೌರವ ಉಪಸ್ಥಿತಿ ವಹಿಸುವರು. ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹೆಚ್.ಸಿ. ಚಂದ್ರಶೇಖರ, ಸಾರ್ವಜನಿಕ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕ ಸಕ್ರೆಪ್ಪಗೌಡ ಬಿರಾದಾರ ಹಾಗೂ ಕಮಲಾಪುರ ಡಯಟ್ ಪ್ರಾಂಶುಪಾಲ ಬಿ.ಎಸ್. ಮಾಯಾಚಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.