568 ಜನರಿಗೆ ಕೋವಿಡ್ ಸೋಂಕು ದೃಢ: 155 ಮಂದಿ ಬಿಡುಗಡೆ

ಚಿತ್ರದುರ್ಗ,ಮೇ.21;
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 568 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 22,563 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 289, ಚಳ್ಳಕೆರೆ 88, ಹಿರಿಯೂರು 59, ಹೊಳಲ್ಕೆರೆ 72, ಹೊಸದುರ್ಗ 48, ಮೊಳಕಾಲ್ಮುರು ತಾಲ್ಲೂಕಿನಲ್ಲಿ 12 ಪ್ರಕರಣಗಳು ಸೇರಿದಂತೆ ಒಟ್ಟು 568 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 155 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 2490 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 568 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 22,563 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ನಾಲ್ವರು ಮೃತರಾಗಿದ್ದು ಇದುವರೆಗೆ ಒಟ್ಟು 121 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 18,290 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 4,152 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 186276 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,58,343 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,34,339 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 671 ಜನರ ವರದಿ ಬರುವುದು ಬಾಕಿ ಇದೆ. 770 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.