5,772 ಟಿಕೇಟ್ ರಹಿತ ಪ್ರಯಾಣಿಕರಿಂದ 7,52,152 ರೂ. ಗಳ ದಂಡ ವಸೂಲಿ

ಕಲಬುರಗಿ,ಮೇ.26:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು 2023ರ ಜನವರಿಯಿಂದ ಎಪ್ರಿಲ್-2023 ರ ಅವಧಿಯಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತ್ತಿಯಲ್ಲಿ ಸಂಚರಿಸುವ 62,132 ವಾಹನಗಳನ್ನು ತನಿಖೆ ಗೊಳಪಡಿಸಿ 3,699 ಪ್ರಕರಣಗಳನ್ನು ಪತ್ತೆ ಹಚ್ಚಿ, 5,772 ಟಿಕೇಟ್ ರಹಿತ ಪ್ರಯಾಣಿಕರಿಂದ 7,52,152 ರೂ. ಗಳನ್ನು ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

 ಅದೇ ರೀತಿ ತನಿಖಾಧಿಕಾರಿಗಳು ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,25,102 ರೂ. ಗಳನ್ನು ಪತ್ತೆ ಹೆಚ್ಚಿದ್ದಾರೆ. ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ತಪ್ಪದೇ ಟಿಕೇಟ್/ಪಾಸ್ ಪಡೆದು ಪ್ರಯಾಣಿಸಬೇಕೆಂದು ಅವರು ತಿಳಿಸಿದ್ದಾರೆ.