58 ಕೊರೊನಾ ಪಾಸಿಟಿವ್ :06 ಜನರ ಸಾವು

ಕಲಬುರಗಿ:ಜೂ.10: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 58 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 06 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60803 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
71 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 59205 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
798 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 06 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 06 ಜನರ ಸಾವಿನೊಂದಿಗೆ ಈ ವರೆಗೆ 800 ಜನರು ಸಾವಿಗೀಡಾದಂತಾಗಿದೆ .