ಹು-ಧಾ ಪಶ್ಚಿಮ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಲು ಬಯಸಿ ಕಾಂಗ್ರೆಸ್ ಪಕ್ಷದ ಧುರೀಣ ಡಾ. ಶರಣಪ್ಪ ಕೊಟಗಿ ಅವರು ಬೆಂಗಳೂರಿನಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಭಾಪತಿ ಈರಣ್ಣ ಮತ್ತಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.