59 ಕ್ಷೇತ್ರಗಳ ಉಪ ಸಮರದಲ್ಲಿ ಬಿಜೆಪಿ ಮೇಲುಗೈ

ನವದೆಹಲಿ,ನ.೧೦- ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗುಜರಾತ್,ಜಾರ್ಖಂಡ್, ಕರ್ನಾಟಕ ಸೇರಿದಂತೆ ೧೧ ರಾಜ್ಯಗಳ ೫೯ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನೆಡೆ ದಾಖಲಿಸಿದೆ.
ಮಧ್ಯ ಪ್ರದೇಶದಲ್ಲಿ ಶಾಸಕರುಗಳ ರಾಜೀನಾಮೆಯಿಂದ ತೆರವಾಗಿದ್ದ ೨೮ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಲ್ಲಿ ೧೮ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಅಗತ್ಯವಾದ ಬಹುಮತ ಗಳಿಸಿ ಸರ್ಕಾರ ಮತ್ತಷ್ಟು ಸುಭದ್ರವಾಗುವಂತಾಗಿದೆ.
ಮಧ್ಯ ಪ್ರದೇಶದಲ್ಲಿ ೮ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯಲಿದೆ. ಗುಜರಾತ್, ಉತ್ತರ ಪ್ರದೇಶದಲ್ಲೂ ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಗುಜರಾತ್‌ನ ೮ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ೭ರಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದೆ.
ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಉತ್ತರ ಪ್ರದೇಶದ ೭ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ೫ ಕ್ಷೇತ್ರಗಳಲ್ಲಿ ಕಾಂಗ್ರೆಸ್, ೨ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ತೆಲಂಗಾಣದಲ್ಲಿ ನಡೆದಿರುವ ಒಂದು ಕ್ಷೇತ್ರದ ಉಪಚುನಾವಣೆಯಲ್ಲೂ ಬಿಜೆಪಿ ಮುನ್ನಡೆಯಲಿದೆ. ಇಲ್ಲಿ ಟಿಆರ್‌ಎಸ್ ಹಿನ್ನೆಡೆ ಹೊಂದಿದೆ. ಕರ್ನಾಟಕದ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆಯಲಿದೆ. ಮಣಿಪುರದ ೫ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ೧ ಕಾಂಗ್ರೆಸ್ ೧ ಕ್ಷೇತ್ರದಲ್ಲಿ ಮುನ್ನಡೆಯಲಿದೆ. ಒಡಿಶಾದ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಬಿಜೆಡಿ, ಮತ್ತೊಂದರಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಡದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯಲಿದೆ.