6 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಉದ್ಘಾಟನೆ

ಕಲಬುರಗಿ:ಜ.19:ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೇಂಗಳೂರು ಹಾಗೂ ಬಸವರಜ ಕಣಮುಸ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕಲಬುರಗಿ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ 6 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಶ್ರೀ. ಬಸವರಾಜ ಕಣಮುಸ, ಉಪ ನಿರ್ದೇಶಕರು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕಲಬುರಗಿ ಇವರು ಉದ್ಘಾಟಿಸಿ ಮಾತನಾಡುತ್ತ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉದ್ಯಮ ಮಾಡಲು ಅನೇಕ ಯೋಜನೆಗಳು ಇರುತ್ತವೆ ಅದನ್ನು ಸರಿಯಾದ ಆಯ್ಕೆಗಳನ್ನು ಮಾಡಿಕೊಂಡು ಸ್ವಂತ ಉದ್ಯಮ ಪ್ರಾರಂಭಿಸಿ ಬೇರೆಯಾವರಿಗೆ ಕುಡಾ ಉದ್ಯೋಗಾವಕಾಶ ಮಾಡಿಕೊಡಬೇಕೇಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿÀ ಪ್ರಾಸ್ತಾವಿಕವಾಗಿ ಮಾತನಾಡುತಾ ಶ್ರೀ. ಸೈಯದ್ ಅಶ್ಫಾಖ್ ಅಹ್ಮದ್, ಉಪನ್ಯಾಸಕರು, ಸಿಡಾಕ್, ಕಲಬುರಗಿ ಇವರು ಮಾತನಾಡುತ್ತಾ 6 ದಿನಗಳ ಅವಧಿಯ ತರಬೇತಿಯಲ್ಲಿ ಸಾಧನಾ ಪ್ರೇರಣಾ ತರಬೇತಿ, ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ, ಉದ್ದಿಮೆಯನ್ನು ಆಯ್ಕೆ ಮಾಡುವ ವಿಧಾನ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಸಮೀಕ್ಷೆ ಮಾಡುವ ವಿಧಾನ ಬ್ಯಾಂಕ್ ವ್ಯವಹಾರಗಳು, ಉದ್ಯಮ ಸ್ಥಾಪನೆಗೆ ಇರುವ ಸಾಲ ಸೌಲಭ್ಯಗಳು ಮತ್ತು ಇತರ ಸಂಬಂಧಪಟ್ಟ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವದು ಎಂದು ತಿಳಿಸಿದರು.
ಶ್ರೀ.ತುಕಾರಾಮ ತಾಲುಕಾ ಕಾರ್ಯಕ್ರಮ ವ್ಯವಸ್ಥಾಪಕರು, ಕಲಬುರಗಿ ಕಾರ್ಯಕ್ರಮ ಕುರಿತು ಮಾತಾನಾಡಿದರು. ಸಿಡಾಕಿನ ಸಿಬ್ಬಂದಿ ವರ್ಗದವರು ಮತ್ತು ಇನ್ನಿತರೆ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದರು.