
ಕಲಬುರಗಿ,ಮಾ.16:ನಗರದ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣದ ಹತ್ತಿರ ಇರುವ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ವೃತ್ತವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 60 ಲಕ್ಷ ರೂ.ಗಳ ಅನುದಾನದೊಂದಿಗೆ ಅಭಿವೃದ್ಧಿಪಡಿಸಲು ಮಾರ್ಚ್ 18ರಂದು ಬೆಳಿಗ್ಗೆ 10 ಗಂಟೆಗೆ ಅಡಿಗಲ್ಲು ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ್ ಪೂಜಾರಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನೆಯನ್ನು ರಾಜ್ಯದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ನೆರವೇರಿಸುವರು. ದಿವ್ಯಸಾನಿಧ್ಯವನ್ನು ಸಿದ್ಧರಾಮಾನಂದಪುರಿ ಸ್ವಾಮೀಜಿ, ಸಾನಿಧ್ಯವನ್ನು ಚೌಡಾಪುರಿ ಹಿರೇಮಠದ ರಾಜಶೇಖರ್ ಶಿವಾಚಾರ್ಯರು ವಹಿಸುವರು ಎಂದರು.
ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಹಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಆಗಮಿಸುವರು. ಅಧ್ಯಕ್ಷತೆಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ್ ಪಾಟೀಲ್ ರೇವೂರ್ ಅವರು ವಹಿಸುವರು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ. ಅಜಯಸಿಂಗ್, ಬಾಬುರಾವ್ ಚಿಂಚನಸೂರ್, ಡಾ ಬಿ.ಜಿ. ಪಾಟೀಲ್, ಚಂದ್ರಶೇಖರ್ ಪಾಟೀಲ್, ಸುನೀಲ್ ವಲ್ಲ್ಯಾಪೂರೆ, ಶಶೀಲ್ ಜಿ. ನಮೋಶಿ, ಡಾ. ಸಾಬಣ್ಣ ತಳವಾರ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ, ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ್ ಪಾಟೀಲ್ ಸೇಡಂ, ಮಹಾನಗರ ಪಾಲಿಕೆಯ ಸದಸ್ಯೆ ಶ್ರೀಮತಿ ರೇಣುಕಾ ರಾಮುರೆಡ್ಡಿ ಗುಮ್ಮಟ್ ಅವರು ಆಗಮಿಸುವರು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಭಗವಂತರಾಯಗೌಡ ಪಾಟೀಲ್, ಪರಮೇಶ್ ಆಲಗೂಡ್, ಧರ್ಮರಾಜ್ ಹೇರೂರ್, ಶ್ರೀಮತಿ ನಿರ್ಮಲಾ ಬರಗಾಲಿ, ರವಿ ಪೂಜಾರಿ ಜಂಬಗಾ, ಶರಣು ಬೇಲೂರ್ ಮುಂತಾದವರು ಉಪಸ್ಥಿತರಿದ್ದರು.