60 ಸಾವಿರ ರೂ.ಮೌಲ್ಯದ 12 ಗ್ರಾಂ.ಬಂಗಾರದ ಚೈನ್ ಕಳವು

ಕಲಬುರಗಿ,ಏ.25-ವ್ಯಕ್ತಿಯೊಬ್ಬರು ಹೋಟೆಲ್ ಒಂದರಲ್ಲಿ ಊಟ ಮಾಡುವ ವೇಳೆ 60 ಸಾವಿರ ರೂ.ಮೌಲ್ಯದ 12 ಗ್ರಾಂ.ಬಂಗಾರದ ಚೈನ್ ಕಳವಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಆಳಂದ ತಾಲ್ಲೂಕಿನ ಖಾನಾಪೂರ ಗ್ರಾಮದ ಚೆನ್ನವೀರ ತಂದೆ ಶಾಂತಪ್ಪ ದೇವಂತಗಿ ಎಂಬುವವರೇ 12 ಗ್ರಾಂ. ಬಂಗಾರದ ಚೈನ್ ಕಳೆದುಕೊಂಡಿದ್ದು, ಈ ಸಂಬಂಧ ಅವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ತಮ್ಮ ಮಾವನ ಮಗ ನಾಗಪ್ಪ ಅವರ ಜೊತೆ ಏ.19 ರಂದು ಮುಗಳಖೋಡ ದೇವಸ್ಥಾನಕ್ಕೆ ಹೋಗಿ ಸಾಯಂಕಾಲ ಮರಳಿ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದು ಬಾರ್ ಒಂದರಲ್ಲಿ ಮದ್ಯ ಸೇವಿಸಿದ್ದಾರೆ. ನಂತರ ಹೋಟೆಲ್‍ಗೆ ಹೋಗಿ ಊಟ ಮಾಡುವ ವೇಳೆ 60 ಸಾವಿರ ರೂ.ಮೌಲ್ಯದ 12 ಗ್ರಾಂ.ಬಂಗಾರದ ಚೈನ್ ಕಳವಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಶೋಕನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.