600 ಹಳ್ಳಿಗಳಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಪೂರ್ಣ :ಪ್ರಭು ಚವ್ಹಾಣ್

ಬೀದರ:ಜೂ.1: ರಾಜ್ಯ ಸರ್ಕಾರದ ಮಹತ್ವದ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಈಗಾಗಲೇ ಬೀದರ ಜಿಲ್ಲೆಯ 600 ಹಳ್ಳಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಡೆಸಲಾಗಿದೆ ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಹೇಳಿದರು.
ಮೇ 31ರಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ರಾಮದ ಪ್ರತಿಯೊಬ್ಬ ನಾಗರಿಕರೂ ಕೋವಿಡ್ 19 ತಪಾಸಣೆಗೆ ಒಳಪಡಲು ನೆರವಾಗುವ ಈ ಕಾರ್ಯಕ್ರಮವು ಜಿಲ್ಲೆಯಲ್ಲಿ ಅಚ್ಚಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದರು. ವಿಶೇಷವಾಗಿ ಬಸವಕಲ್ಯಾಣ ತಾಲೂಕಿನಲ್ಲಿ ಈಗಾಗಲೇ 190 ಹಳ್ಳಿಗಳಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದರು.
ಮೇ 31ರಂದು 17 ಜನರಿಗೆ ಕೊವಿಡ್ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 66 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಾಲ್ವರು ಚಿಕಿತ್ಸೆಗಾಗಿ ಆಸ್ಪತ್ರಗೆ ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರೀಯ ಪ್ರಕರಣಗಳು 326, ಹೋಮ್ ಐಸೋಲೇಶನದಲ್ಲಿ 254 ಜನರಿದ್ದಾರೆ. ಈಗ 92 ಜನರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಮೇ 31ರಂದು ಒಟ್ಟು 3000 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರೆಮಡಿಸಿವರ್ ಎಂಜೆಕ್ಷನ್ ಅಗತ್ಯ ಪ್ರಮಾಣದಲ್ಲಿ ಲಭ್ಯವಿದೆ. ಆಕ್ಸಿಜನ್ ಮತ್ತು ಬೆಡ್ ಕೊರತೆ ಇಲ್ಲ. 19 ಜನರಿಗೆ ಬ್ಲಾಕ್ ಫಂಗಸ್ ಸೋಂಕು ಇರುವ ಬಗ್ಗೆ ವರದಿಯಾಗಿದೆ. ಇವರಿಗೆ ಪ್ರತ್ಯೇಕ ವಾರ್ಡಗಳನ್ನು ಮಾಡಿ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕೋವಿಡ್ ಲಸೀಕಾರಕರಣವು ತೀವ ರೀತಿಯಲ್ಲಿ ನಡೆಯುತ್ತಿದೆ. ಜಿಲ್ಲಾಡಳಿತ, ತಾಲೂಕಾಡಳಿತ ಎಲ್ಲರೂ ಸೇರಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮೇ 31ರಂದು ಅತೀ ಕಡಿಮೆ ಸಂಕ್ಯೆಯಲ್ಲಿ ಕೊವಿಡ್ ಸೋಂಕು ಪ್ರಕರಣಗಳು ದಾಖಾಲಾಗಿದ್ದು, ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ಶೂನ್ಯಕ್ಕೆ ಬರುವಂತಾಗಲು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಸೇವಕನಾಗಿ ತಾವು ಕೆಲಸ ಮಾಡುವುದಾಗಿ ಸಚಿವರು ಹೇಳಿದರು.
400 ಕೋರೊನಾ ವಾರಿಯರ್ಸಗೆ ಸನ್ಮಾನ: ಕೊರೋನಾ ತಡೆಗೆ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ, ಪೊಲಿಸ್ ಸೇರಿದಂತೆ ಇನ್ನೀತರ ಇಲಾಖೆಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೋರೊನಾ ವಾರಿಯರ್ಸ ಎಂದು ಅವರಿಗೆ ಸನ್ಮಾನ ಮಾಡಲಾಗುತ್ತಿದೆ. ಮೆ.31ರಂದು 400 ಜನರಿಗೆ ಸನ್ಮಾನ ಮಾಡಿದ್ದು, ಜೂನ್ 1ರಂದು ಹುಮನಾಬಾದ್ ಮತ್ತು ಚಿಟಗುಪ್ಪದಲ್ಲಿ ಸನ್ಮಾನ ಮಾಡುತ್ತಿರುವುದಾಗಿ ಸಚಿವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬೀದರ ಶಾಸಕರಾದ ರಹೀಂ ಖಾನ್, ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜಹೀರಾ ನಸೀಮ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಹಾಗೂ ಇನ್ನೀತರರು ಇದ್ದರು.