ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕದ ರೇಷ್ಮೆ ಇಲಾಖೆಯ ಸರ್ಕಾರಿ ತಾಂತ್ರಿಕ ನೌಕರರ ಸಮಾವೇಶದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಪಾಲ್ಗೊಂಡಿದ್ದರು. ಇದೇ ವೇಳೆ ಸಂಘದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಸಚಿವರು ಬಿಡುಗಡೆಗೊಳಿಸಿದರು. ಮಾಜಿ ರೇಷ್ಮೆ ಸಚಿವರು, ಸಂಸದ ಬಿ ಎನ್ ಬಚ್ಚೇಗೌಡ, ರೇಷ್ಮೆ ಇಲಾಖೆ ಆಯುಕ್ತ ರಾಜೇಶ್ ಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.