ಚಿಕ್ಕಮಗಳೂರು, ಜ.೧೮- ಇಂದಿನಿಂದ ಐದು ದಿನಗಳ ಕಾಲ ನಡೆಯುವ ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಫಲಪುಷ್ಪ, ಕೃಷಿ, ತಂತ್ರಜ್ಞಾನ ಮತ್ತು ಆಕರ್ಷಕ ವಸ್ತು ಪ್ರದರ್ಶನದ ಸಂಗಮವಾದ ಚಿಕ್ಕಮಗಳೂರು ಜ್ಞಾನ ವೈಭವ ಮೇಳ ಉದ್ಘಾಟಿಸಲಾಯಿತು.
ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ), ಕೇಂದ್ರದ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ,ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ತೋಟಗಾರಿಕೆ,ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಮುನಿರತ್ನ, ಚಲನಚಿತ್ರ ಕಲಾವಿದೆ ತಾರಾ ಅನುರಾಧ ಸೇರಿದಂತೆ ಜಿಲ್ಲೆಯ ಅನೇಕ ಗಣ್ಯರು ಉಪಸ್ಥಿತರಿದ್ದರು.
ಜ್ಞಾನ ವೈಭವ ಮೇಳದ ಅಧ್ಯಕ್ಷತೆಯನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಸಿ.ಟಿ.ರವಿ ವಹಿಸಿದ್ದರು.