63 ಕೊರೊನಾ ಪಾಸಿಟಿವ್ :04 ಜನರ ಸಾವು

ಕಲಬುರಗಿ:ಜೂ.8: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 63 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 04 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60697 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
124 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 59055 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
848 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 04 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 04 ಜನರ ಸಾವಿನೊಂದಿಗೆ ಈ ವರೆಗೆ 794 ಜನರು ಸಾವಿಗೀಡಾದಂತಾಗಿದೆ .