637 ಜನರಿಗೆ ಕೋವಿಡ್ ಸೋಂಕು ದೃಢ: 868 ಮಂದಿ ಬಿಡುಗಡೆ

ಚಿತ್ರದುರ್ಗ,ಜೂ.2; ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 637 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,987ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 274, ಚಳ್ಳಕೆರೆ 72, ಹಿರಿಯೂರು 119, ಹೊಳಲ್ಕೆರೆ 31, ಹೊಸದುರ್ಗ 119, ಮೊಳಕಾಲ್ಮುರು ತಾಲ್ಲೂಕಿನ 22 ಪ್ರಕರಣಗಳು ಸೇರಿದಂತೆ ಒಟ್ಟು 637 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 868 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 3131 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 637 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 29,987ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಐವರು ಮೃತರಾಗಿದ್ದು ಇದುವರೆಗೆ ಒಟ್ಟು 149 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 23,138 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 6,700 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 294826 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,86,317 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,55,034 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 487 ಜನರ ವರದಿ ಬರುವುದು ಬಾಕಿ ಇದೆ. 809 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.