ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಧಾರವಾಡದ ಶಿವಾಜಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಮಹಾಪೌರ ಈರೇಶ ಅಂಚಟಗೇರಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ, ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ, ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ವಿಜಯಾನಂದ ಶೆಟ್ಟಿ , ಪಾಲಿಕೆ ಸದಸ್ಯ ಸುರೇಶ ಬೆದರೆ, ಶಂಕರ ಶೇಳಕೆ, ಮುಖಂಡರಾದ ಸುನಿಲ ಮೋರೆ, ಪಾಲಿಕೆಯ ಸಹಾಯಕ ಆಯುಕ್ತ ಆರ್.ಎಂ.ಕುಲಕರ್ಣಿ ರವರು, ಎಸ್.ಸಿ.ಬೇವೂರ ರವರು, ಪಾಲಿಕೆಯ ಪರಿಷತ್ ಕಾರ್ಯದರ್ಶಿ ಗುರುಸಿದ್ದಪ್ಪ ಡಂಬಳ ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.