ಬಿಜೆಪಿ ತತ್ವಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್‌ನ ದಿಬ್ಬೂರು ರವಿಕುಮಾರ್ ಸಂಗಡಿಗರು ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ(ಎಸ್‌ಟಿಡಿ ಮೂರ್ತಿ) ನೇತೃತ್ವದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಬಿಜೆಪಿ ಹಿರಿಯ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಜನಾರ್ಧನ್ (ಜಾನಿ), ಕಡತನಮಲೆ ಸತೀಶ್, ಯುವ ಮುಖಂಡರಾದ ವಸಂತ್, ಸಾದೇನಹಳ್ಳಿ ಪ್ರಕಾಶ್ ಸೇರಿದಂತೆ ಇನ್ನಿತರರಿದ್ದರು.