ನಗರದ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕರು, ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ವಿ.ಮೋಹನ್, ಅನಿಲಕುಮಾರ್ ಪಾಟೀಲ್, ಅಲ್ತಾಫ್ ಹಳ್ಳೂರ, ಸದಾನಂದ ಡಂಗನವರ, ಗಿರಿಜಾ ಹೂಗಾರ, ಡಿ.ಎಂ. ದೊಡ್ಡಮನಿ ಇನ್ನಿತರರು ಉಪಸ್ಥಿತರಿದ್ದರು.