ಬೇಸಿಗೆ ಕಾಲದಲ್ಲಿ ಸಂಭವಿಸುವ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವು ಲಭ್ಯತೆ ಹಾಗೂ ಇತರೆ ವಿಷಯಗಳ ಕುರಿತು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಜಿಲ್ಲಾಪಂಚಾಯತ್ ಸಿಇಓ ಡಾ. ಸುರೇಶ್ ಇಟ್ನಾಳ, ಮಹಾನಗರ ಪಾಲಿಕೆಯ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಸೇರಿದಂತೆ ಜಲಮಂಡಳಿ, ಮಹಾನಗರಪಾಲಿಕೆ, ಪಶುಪಾಲನಾ ಇಲಾಖೆ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರರು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.