
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 116ನೇ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತ ರಮಣಗುಪ್ತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್. ಅಲ್ಲಾಬಕಾಷ ಹಾಗೂ ವಸತಿ ನಿಲಯಗಳ ನಿಲಯಪಾಲರು ಹಾಗೂ ದಲಿತ ಸಮುದಾಯದ ಮುಖಂಡರು, ಇತರ ಗಣ್ಯರು ಜಯಂತಿಯಲ್ಲಿ ಭಾಗಿಯಾಗಿದ್ದರು.