ವಿಧಾನಸಭೆ ಚುನಾವಣೆ ಹಿನ್ನೆಲೆ ನಗರದ ಎಂ.ಜಿ. ರಸ್ತೆ ಚರ್ಚ್ ಸ್ಟ್ರೀಟ್ ಬಳಿ ಇಂದು ಬೆಳಿಗ್ಗೆ ಹಮ್ಮಿಕೊಂಡಿದ್ದ ಮತದಾನದ ಹಬ್ಬ ಜಾಗೃತಿ ಮೂಡಿಸುವ ಬೈಕ್ ರ್‍ಯಾಲಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಚಾಲನೆ ನೀಡಿದರು. ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ದಯಾನಂದ ಇದ್ದಾರೆ.