ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವದ ಅಂಗವಾಗಿ ಮುಖ್ಯ ಅಧಿಕಾರಿ ಶಂಕರ್ ಹುಲ್ಲಮ್ಮನವರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.