ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ. ದೇವರಾಜ್‌ರವರ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಕ್ಷೇತ್ರದ ವಿವಿಧ ಕಡೆ ತೆರೆದ ವಾಹನದಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್ ಮತ್ತಿತರ ಮುಖಂಡರು ಭಾಗವಹಿಸಿದರು. ಪ್ರಚಾರದ ವೇಳೆ ನೂರಾರು ಕಾರ್ಯಕರ್ತರು ಇದ್ದರು.