ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ. ದೇವರಾಜ್ ರವರು ಇಂದು ಬೆಳಿಗ್ಗೆ ಊರ್ವಶಿ ಥಿಯೇಟರ್ ಬಳಿಯ ವಿನೋಬಾ ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.