ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ರವರು ಯುವಕರ ಬೈಕ್ ರ್‍ಯಾಲಿ ಮೂಲಕ ಕ್ಷೇತ್ರದ ವಿವಿಧ ಕಡೆ ತೆರೆದ ವಾಹನದಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಹಲವಾರು ಮುಖಂಡರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.