69 ಕೊರೊನಾ ಪಾಸಿಟಿವ್ :01 ಸಾವು

ಕಲಬುರಗಿ:ಜೂ.05: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 69 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಬ್ಬರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60507 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
134 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 58677 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
1042 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಬ್ಬರ ಸಾವಿನೊಂದಿಗೆ ಈ ವರೆಗೆ 788 ಜನರು ಸಾವಿಗೀಡಾದಂತಾಗಿದೆ .