ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಸರ್ಕಾರದ ಜನಪರ ಯೋಜನೆಗಳು ಪ್ರತಿಯೊಂದು ಮನೆ ಮನೆಗೆ ತಲುಪಿಸುವ ‘ ಮಹಾಜನ ಸಂಪರ್ಕ ಅಭಿಯಾನ’ ಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನೂತನ ಶಾಸಕರಾದ ಮಹೇಶ ಟೆಂಗಿನಕಾಯಿ, ಹು-ಧಾ ಜಿಲ್ಲಾಧ್ಯಕ್ಷರಾದ ಸಂಜಯ ಕಪಟಕರ, ಹು-ಧಾ ಪಾಲಿಕೆ ಉಪಮೇಯರ್ ಉಮಾ ಮುಕುಂದ, ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.