ನಗರದ ಎನ್‌ಆರ್ ಕಾಲೋನಿ ಬಸವನಗುಡಿಯಲ್ಲಿ ಸಾರ್ಥಕ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕಾಗಿ ನೀಡುತ್ತಿರುವ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ೨೦ ಲಕ್ಷ ಮೌಲ್ಯದ ಹಣವನ್ನು ವಿದ್ಯಾರ್ಥಿ ವೇತನದ ಮೂಲಕ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕರಾದ ಡಾ.ಟಿ. ಎ. ಶರವಣ ಅವರು ಭಾಗಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು , ಈ ಸಂದರ್ಭದಲ್ಲಿ ವಿಸ್ತಾರ ಏರ್ ಲೈನ್ಸ್ ನ ಮುಖ್ಯಸ್ಥರಾದ ಶ್ರೀ. ಭಾಸ್ಕರ್ ಭಟ್ ಹಾಗು ಸಾರ್ಥಕ ಫೌಂಡೇಶನ್ ಅಧ್ಯಕ್ಷರಾದ ರಾಮಪ್ರಸಾದ್ ಅವರು ಉಪಸ್ಥಿತರಿದ್ದರು