ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಕೊಟ್ರೆಪ್ಪ ಅಂಗಡಿ ಅವರ ಪತ್ನಿ ನೀಲವ್ವ ಅಂಗಡಿ ಅವರಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು 5 ಲಕ್ಷ ರೂ ಪರಿಹಾರ ಧನದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ. ಆನಂದ ಶೀಲ್, ಕಂದಾಯ ನಿರೀಕ್ಷಕ ಬಿ.ಎಂ ಕಾತ್ರಾಳ, ಗ್ರಾಮ ಆಡಳಿತಾಧಿಕಾರಿ ಸೇರಿದಂತೆ ಮತ್ತಿತರರು ಇದ್ದರು.