ಹೆಸರಘಟ್ಟ ಹೋಬಳಿಯ ಮಾದಪ್ಪನಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಕೇಂದ್ರ ಸರ್ಕಾರದ ಎನ್‌ಪಿಡಿಡಿ ಯೋಜನೆಯಡಿ ೩೦೦೦ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರವನ್ನು ಟಿಟಿಡಿ ಆಡಳಿತ ಮಂಡಳಿಯ ಸದಸ್ಯ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.