ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಡವರಿಗೆ ಅಕ್ಕಿ ನೀಡದೆ ತಿರಸ್ಕರಿಸಿರುವ ಕೇಂದ್ರದ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಇಂದು ಬೆಳಿಗ್ಗೆ ನಗರದ ಗಾಂಧಿ ಪ್ರತಿಮೆ ಮುಂಭಾಗ ಅಡುಗೆ ಮಾಡುವ ಮೂಲಕ ವಿನೂತನ ರೀತಿ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಕಾಂಗ್ರೆಸ್ ಮುಖಂಡರಾದ ಜಿ. ಜನಾರ್ಧನ್, ಎ. ಆನಂದ್, ಈ. ಶೇಖರ್, ಸುಧಾಕರ್, ಪುಟ್ಟರಾಜು, ಹೇಮರಾಜು, ಮಂಜುನಾಥ್, ಮತ್ತಿತರರು ಭಾಗವಹಿಸಿದ್ದರು.