ಪೌರ ಕಾರ್ಮಿಕರಿಗೆ ನೀಡುತ್ತಿರುವ ಬೆಳಗಿನ ಉಪಹಾರದ ಗುಣಮಟ್ಟದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಅವರು ಹುಬ್ಬಳ್ಳಿಯಲ್ಲಿರುವ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ವಿಜಯಾನಂದ ಶೆಟ್ಟಿ, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ಪಾಲಿಕೆಯ ಅಧಿಕಾರಿಗಳಾದ ಫಕ್ಕಿರಪ್ಪಾ ಇಂಗಳಗಿ, ಸಂತೋಷ ಯರಂಗಳಿ ಉಪಸ್ಥಿತರಿದ್ದರು.