ಧಾರವಾಡ ಜಿಲ್ಲಾ ಉಸ್ತುವಾರಿ, ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಈ ಭಾರಿ ಹು-ಧಾ. ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ವಶಕ್ಕೆ ತೆಗೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕರಾದ ಪ್ರಸಾದ ಅಬ್ಬಯ್ಯ, ವಿನಯ್ ಕುಲಕರ್ಣಿ, ಎನ್.ಎಚ್. ಕೋನರೆಡ್ಡಿ, ಮುಖಂಡರಾದ ಇಸ್ಮಾಯಿಲ್ ತಮಟಗಾರ, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅನಿಲ್ ಪಾಟೀಲ್ ಅವರು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದರು.