7 ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲುವು ಖಚಿತ..

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 7 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದ್ದು, ಈ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ತುಮಕೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು ತಿಳಿಸಿದರು.