ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧ ದಿನದ ಅಂಗವಾಗಿ ನಗರದ ಎಂ.ಎನ್.ಟೆಕ್ನಿಕಲ್ ಇನ್ಸ್‌ಟಿಟ್ಯೂಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸಿಪಿ ಅರುಣ್‌ಗೌಡ, ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದೇಗೌಡ, ಎನ್‌ಬಿಇಟಿಯ ಅಧ್ಯಕ್ಷ ಶಾಂತಕುಮಾರ್, ಕಾರ್ಯದರ್ಶಿ ಡಾ|| ಹರಿದಾಸ್, ಖಜಾಂಚಿ ರಾಜೇಂದ್ರ, ಲಕ್ಷ್ಮೀಶ, ಮುಖ್ಯೋಪಾಧ್ಯಾಯನಿ ಜ್ಯೋತಿ ಶ್ರೀ ಮತ್ತಿತರರು ಭಾಗವಹಿಸಿದ್ದರು. ಮಾದಕ ವಸ್ತುಗಳ ದುರ್ಬಳಕೆ ಮತ್ತು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.