ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ನಿಮಿತ್ತ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಮಾಜದ ಮುಖಂಡರಾದ ಎ.ಎಂ. ಹಿಂಡಸಗೇರಿ, ಐ.ಜಿ. ಸನದಿ, ಮಹ್ಮದ್ ಯೂಸೂಫ್ ಸವಣೂರ, ಅಲ್ತಾಫ್ ಹುಸೇನ್ ಹಳ್ಳೂರ ಅನ್ವರ ಮುಧೋಳ, ಬಾಬಾಜಾನ ಮುಧೋಳ, ಫಾರುಕ್ ಅಬ್ಬುನವರ ಮತ್ತಿತರರು ಭಾಗವಹಿಸಿದ್ದರು.