ರಾಜ್ಯ ಎಸ್.ಸಿ., ಎಸ್.ಟಿ. ಉಪಯೋಜನೆಯ ಕಾಯ್ದೆಯನ್ನು ರದ್ದುಪಡಿಸುವಂತೆ ಹಾಗೂ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟರ ಭೂಮಿ ರಕ್ಷಿಸುವಂತೆ ಒತ್ತಾಯಿಸಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ. ರಾಮು ನೇತೃತ್ವದಲ್ಲಿ ಸದಸ್ಯರು, ಕಾರ್ಯಕರ್ತರು ಇಂದು ಬೆಳಿಗ್ಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.