ಇಂದು ಬೆಳಿಗ್ಗೆ ನಿಧನ ಹೊಂದಿದ ಕೇರಳ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಧುರೀಣ ಓಮನ್ ಚಾಂಡಿ ಅವರ ಪ್ರಾರ್ಥೀವ ಶರೀರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಜಿ ಅಧ್ಯಕ್ಷರುಗಳಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಅಂತಿಮ ನಮನ ಸಲ್ಲಿಸಿದರು.