ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಯುವ ಕಾಂಗ್ರೆಸ್ ನಾಯಕರು ಇಂದು ಬೆಳಿಗ್ಗೆ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಮುಖಂಡರಾದ ಎ. ಆನಂದ್, ಜಿ. ಜನಾರ್ಧನ್, ಈ ಶೇಖರ್, ಪರಿಸರ ರಾಮಕೃಷ್ಣ ಜಿ. ಹೇಮರಾಜು, ಉಮೇಶ್, ಚಂದ್ರಶೇಖರ್, ಪುಟ್ಟರಾಜು, ಮತ್ತಿತರರು ಭಾಗವಹಿಸಿದ್ದರು.