ಲಿವರ್ ಕಾಯಿಲೆ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಹೆಪಟೈಟಿಸ್ ದಿನದ ಪ್ರಯುಕ್ತ ಕರ್ನಾಟಕ ಗ್ಯಾಸ್ಟ್ರೋ ಸೆಂಟರ್ ಮತ್ತು ಗೌತಮ್ ಆಲೈಡ್ ಸೈನ್ಸ್ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ರಾಜಾಜಿನಗರ, ಮಂಜುನಾಥ ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಸಿದರು. ಕಾಲೇಜಿನ ಪ್ರಾಂಶುಪಾಲರು, ಬೋಧಕ ವರ್ಗ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.