ಇಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹರನಹಳ್ಳಿ ಅವರು ಮತ್ತು ಕಾರ್ಯದರ್ಶಿಗಳಾದ ಶ್ರೀ ಶ್ರೀಧರ ಮೂರ್ತಿರವರು ಮಹಾಸಭಾದ ಪರವಾಗಿ ಶ್ರೀ ಶಾರದಾ ಲಕ್ಷ್ಮಿ ನರಸಿಂಹ ಪೀಠಾಧೀಶ್ವರರಾದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಎಲ್ಲ ವಿಪ್ರಭಾಂಧವರ ಪರವಾಗಿ ಭಿಕ್ಷಾ ಸಮರ್ಪಿಸಿದರು. ಈ ಸಂದರ್ಭದಲ್ಲಿ ವಿಪ್ರ ವಕೀಲರ ಪರಿಷತ್ತಿನ ಅಧ್ಯಕ್ಷರು ಮತ್ತು ಎಲ್ಲ ಪದಾಧಿಕಾರಿಗಳು ಜೊತೆಯಲ್ಲಿದ್ದರು.