ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ 77ನೇಯ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಲಾಯಿತು. ಶಾಸಕರಾದ ಮಹೇಶ್ ಟೆಂಗಿನಕಾಯಿ, ಮಹಾಪೌರರಾದ ವೀಣಾ ಬರದ್ವಾಡ, ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಪಾಲಿಕೆಯ ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.